ಗೃಹಲಕ್ಷ್ಮೀ ಯೋಜನೆ 22 ಕಂತಿನ ಹಣ ಬಿಡುಗಡೆ, Gruhalakshmi Scheme Released, Congress 

ನಮಸ್ಕಾರ ಸ್ನೇಹಿತರೇ, ರಾಜ್ಯದ ಮಹಿಳೆಯರಿಗೆ ಒಂದು ಗುಡ್ ನ್ಯೂಸ್. ಗೃಹಲಕ್ಷ್ಮೀ ಯೋಜನೆಯ 22 ಕಂತಿನ ಹಣ ಬಿಡುಗಡೆ ಆಗಲಿದೆ. ಹೌದು ಇದೀಗ 21ನೇ ಕಂತಿನ ಹಣ ಬಿಡುಗಡೆ ಆಗಿದ್ದು, ಇದೀಗ 22ನೇ ಕಂತಿನ ಹಣಕ್ಕಾಗಿ ಎಲ್ಲರು ಕಾಯುತ್ತಿದ್ದಾರೆ. ಆದರೆ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರು ಒಂದು ಸ್ಪಷ್ಟನೆ ನೀಡಿದ್ದಾರೆ. ಇನ್ನು ಯಾರಿಗೆಲ್ಲ ಯೋಜನೆ ಹಣ ಜಮಾ ಆಗಲಿದೆ. ಮತ್ತು ಯಾರಿಗೆಲ್ಲ ಒಟ್ಟಿಗೆ 2 ಕಂತುಗಳು ಜಮಾ ಆಗುತ್ತೆ ಅಂತಾ ಎಲ್ಲಾ ಮಾಹಿತಿಯನ್ನು ಇದೀಗ ನೋಡೋಣ. ಆದಷ್ಟು ಇದನ್ನು ಎಲ್ಲಾ ಕಡೆ ಶೇರ್ ಮಾಡುವ ಪ್ರಯತ್ನ ಮಾಡಿ

ಗೃಹಲಕ್ಷ್ಮೀ ಯೋಜನೆ 22 ಕಂತಿನ ಹಣ ಬಿಡುಗಡೆ, Gruhalakshmi Scheme Released, Congress, Government New Scheme, Congress Garantee Scheme Update

ಕಾಂಗ್ರೆಸ್ ನ ಐದು ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆಯು ಒಂದು. ಈ ಯೋಜನೆಯ ಮೂಲಕ ಮನೆ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2000 ರೂಪಾಯಿಗಳು ಸಿಗುತ್ತವೆ. ಇಲ್ಲಿಯವರೆಗೆ ಒಟ್ಟಾರೆಯಾಗಿ 21 ಕಂತಿನವರೆಗೆ ಗೃಹಲಕ್ಷ್ಮೀ ಯೋಜನೆ ಹಣ ನೀಡಲಾಗಿದೆ. ಅಂದರೆ ಒಟ್ಟಾರೆಯಾಗಿ 42,000 ರೂಪಾಯಿಗಳನ್ನು ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ನೀಡಲಾಗಿದೆ. ಇವಾಗ ನೀಡಬೇಕಾಗಿರುವುದು 22 ಮತ್ತು 23ನೇ ಕಂತಿನ ಹಣವನ್ನು ನೀಡಬೇಕಾಗಿರುವುದು.

ಗೃಹಲಕ್ಷ್ಮೀ ಯೋಜನೆ 22 ಕಂತಿನ ಹಣ ಬಿಡುಗಡೆ, Gruhalakshmi Scheme Released, Congress, Government New Scheme, Congress Garantee Scheme Update, gruhalakshmi kannada update, trending news, Congress scheme update kannada, my edu update kannada

ಇನ್ನು ಈ ಹಿಂದೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರು ಜುಲೈ ತಿಂಗಳಲ್ಲಿ ನಾವು ಒಂದು ಕಂತಿನ ಹಣ ಜಮಾ ಮಾಡುತ್ತೇವೆ ಅಂತ ಹೇಳಿದ್ದರು. ಆದರೆ ಯಾರಿಗೂ ಕೂಡ ಯೋಜನೆ ಹಣ ಜಮಾ ಮಾಡಲಾಗಿಲ್ಲ. ಅನಂತರ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ 21ನೇ ಕಂತು ಜಮಾ ಮಾಡಲಾಗಿತ್ತು. ಆದರೆ ಇದೀಗ ತುಂಬಾ ಜನರಿಗೆ 21ನೇ ಕಂತಿನ ಹಣ ಇನ್ನು ಕೂಡ ಬಂದಿಲ್ಲ. ಆದ್ದರಿಂದ ಇದೀಗ ಸರ್ಕಾರದಿಂದ 2 ಕಂತಿನ ಹಣವನ್ನು ಬಿಡುಗಡೆ ಮಾಡಲು ಮುಂದಾಗಿದೆ.

ಗೃಹಲಕ್ಷ್ಮೀ ಯೋಜನೆ 22ನೇ ಕಂತು ಬಿಡುಗಡೆ:

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರು 21 ನೇ ಕಂತಿನ ಹಣ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಈಗಾಗಲೇ ಬಿಡುಗಡೆ ಮಾಡಲಾಗಿದೆ. ಇನ್ನು ಗೌರಿ ಗಣೇಶ ಹಬ್ಬದ ಪ್ರಯುಕ್ತ ಗೃಹಲಕ್ಷ್ಮೀ ಯೋಜನೆ 22ನೇ ಕಂತಿನ ಹಣ ಜಮಾ ಮಾಡುತ್ತೇವೆ ಅಂತ ಹೇಳಿದ್ದರು. ಇದೀಗ ಎಲ್ಲರು ಕಾಯುತ್ತಿರುವುದು 22ನೇ ಹಣಕ್ಕಾಗಿ. ಇದೀಗ ಸರ್ಕಾರ ಈಗಾಗಲೇ ನೀವು DBTಗೆ ಹಣ ವರ್ಗಾವಣೆ ಮಾಡಿದ್ದೇವೆ. ಇನ್ನೇನು ಕೆಲವೇ ದಿನಗಳಲ್ಲಿ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರು ಸ್ಪಷ್ಟಣೆ ನೀಡಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ನಿಮ್ಮ ಖಾತೆಗಳಿಗೆ ಜಮಾ ಆಗುತ್ತೆ, ಇನ್ನು ಇದರ ಬಗ್ಗೆ ಹೆಚ್ಚಿನ ಮಾಹಿತಿ ಬಂದಲ್ಲಿ ನಾವು ಇದರ ಬಗ್ಗೆ ಮಾಹಿತಿ ನೀಡುತ್ತೇವೆ.

ಇದನ್ನ ಓದಿ: ಕಾರು ಟ್ಯಾಕ್ಸಿ ಖರೀದಿಗೆ 4ಲಕ್ಷ ಸಹಾಯಧನ, 4 lakh subsidy for purchase of car taxi, ಸ್ವಾವಲಂಬಿ ಸಾರಥಿ ಯೋಜನೆ 2025

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಾವು 5 ಗ್ಯಾರೆಂಟಿ ಯೋಜನೆಗಳನ್ನ ಜಾರಿಗೆ ತರುತ್ತೇವೆ ಅಂತಾ ಹೇಳಿದ್ರು. ಅವುಗಳೆಂದರೆ ಶಕ್ತಿ ಯೋಜನೆ, ಗೃಹಜ್ಯೋತಿ ಯೋಜನೆ, ಗೃಹಲಕ್ಷ್ಮೀ ಯೋಜನೆ, ಯುವನಿಧಿ ಯೋಜನೆ ಹಾಗೂ ಅನ್ನಭಾಗ್ಯ ಯೋಜನೆ. ಈ 5 ಯೋಜನೆಗಳನ್ನ ನಮ್ಮ ಸರ್ಕಾರ ಬಂದ ನಂತರ ಜನರಿಗೆ ನೀಡುತ್ತೇವೆ ಅಂತ ಹೇಳಿದ್ರು. ಇದೀಗ ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷಗಳಿಗೂ ಹೆಚ್ಚು ಕಾಲ ಕಳೆದಿವೆ. ಇನ್ನು ಅವರು ಹೇಳಿರುವ ಯೋಜನೆಗಳಲ್ಲಿ ಕೆಲವೊಂದಿಷ್ಟು ಬದಲಾವಣೆಯನ್ನ ಮಾಡಿ ಯೋಜನೆಯನ್ನ ಜನರಿಗೆ ತಲುಪಿಸುತ್ತಿದ್ದಾರೆ. ಇದರಲ್ಲಿ ಮುಖ್ಯವಾಗಿ ಗೃಹಲಕ್ಷ್ಮೀ ಯೋಜನೆ. ಈ ಯೋಜನೆ ಮೂಲಕ ಮನೆಯ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2000 ರೂ ಹಣವನ್ನ ಜಮಾ ಮಾಡಲಾಗುತ್ತಿತ್ತು.

ಗೃಹಲಕ್ಷ್ಮೀ ಯೋಜನೆ 2 ಕಂತು  ಜಮಾ:

ಆಗಸ್ಟ್ ತಿಂಗಳಿನಲ್ಲಿ 21ನೇ ಕಂತಿನ ಹಣ ಬಿಡುಗಡೆ ಮಾಡಲಾಗಿತ್ತು. ಆದರೆ ತುಂಬಾ ಜನರಿಗೆ ಇನ್ನೂ ಕೂಡ ಯೋಜನೆ ಹಣ ಬಂದಿಲ್ಲ. ಈ ಮಧ್ಯ 22ನೇ ಕಂತಿನ ಹಣ ಬಿಡುಗಡೆ ಮಾಡಲು ಸರ್ಕಾರ ಮುಂದಾಗಿದೆ. ಇನ್ನು ರಾಜ್ಯದಲ್ಲಿ 12% ಜನರಿಗೆ ಇನ್ನೂ ಕೂಡ ಯೋಜನೆ ಹಣ ಬಂದಿಲ್ಲ. ಆದ್ದರಿಂದ ಇದೀಗ ಸರ್ಕಾರ ಒಂದೇ ಸಲ 2 ಕಂತುಗಳು ಬಿಡುಗಡೆ ಮಾಡಲು ಮುಂದಾಗಿದೆ. ಹೌದು, ಯಾರಿಗೆಲ್ಲ 21ನೇ ಕಂತಿನ ಹಣ ಇನ್ನು ಕೂಡ ಬಂದಿಲ್ವೊ, ಅವರಿಗೆ 21 ಮತ್ತು 22 ಕಂತು ಒಂದೇ ಸಲ 4000 ಹಣ ಜಮಾ ಆಗಲಿದೆ ಅಂತ ಮಾಹಿತಿ ಇದೀಗ ತಿಳಿದು ಬಂದಿದೆ.

ಇದನ್ನ ಓದಿ: ಬಿಗ್ ಬಾಸ್ 12ನೇ ಸ್ಪರ್ಧಿಗಳು ಇವರೇ, ನಿಮ್ಮ ಪ್ರಕಾರ ಇವರಲ್ಲಿ ಯಾರು ಬರಲಿದ್ದಾರೆ, BBK12
ಹೊಸದಾಗಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸೋದು ಹೇಗೆ?

ನಿಮ್ಮ ಗೃಹಲಕ್ಷ್ಮೀ ಖಾತೆ ಕ್ಯಾನ್ಸಲ್ ಆಗಿದ್ದಲ್ಲಿ, ನೀವು ಗೃಹಲಕ್ಷ್ಮೀ ಯೋಜನೆಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕು. ನಿಮ್ಮ ಹತ್ತಿರದ ಕರ್ನಾಟಕ ಒನ್, ಗ್ರಾಮ್ ಒನ್, ಬೆಂಗಳೂರು ಒನ್, ಸೇವಾ ಸಿಂಧೂ ಕೇಂದ್ರ ಹಾಗೂ ಹತ್ತಿರದ ಜಿಲ್ಲಾ ಪಂಚಾಯತ್ ಗೆ ಹೋಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ನಂತರ ತಿಂಗಳಿನ ನಂತರ ಒಂದೊಂದಾಗಿ ನಿಮ್ಮ ಖಾತೆಗೆ ಯೋಜನೆ ಹಣ ಜಮಾ ಆಗಲು ಶುರುವಾಗುತ್ತೆ. ಈಗಲೇ ಒಮ್ಮೆ ಚೆಕ್ ಮಾಡಿ. ಎನಾದರೂ ಸಮಸ್ಯೆ ಆಗಿದ್ದಲ್ಲಿ ಕೂಡಲೇ ನಿಮ್ಮ ಹತ್ತಿರದ ಆಹಾರ ಇಲಾಖೆಗೆ ಹೋಗಿ ಒಮ್ಮೆ ಪರೀಕ್ಷಿಸಿ. ನಂತರ ಮತ್ತೆ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಬೇಕು.

ಇನ್ನು ನಿಮಗೆ ಎಲ್ಲಿಯವರೆಗೆ ಈ ಹಣ ಬಂದಿದೆ ಹಾಗೂ ಯಾವ ತಿಂಗಳ ಕಂತು ಬರಬೇಕು ಎನ್ನುವುದನ್ನ ಕಮೆಂಟ್ ಮಾಡಿ ತಿಳಿಸಿ.

ಗೃಹಲಕ್ಷ್ಮೀ ಯೋಜನೆ 22 ಕಂತಿನ ಹಣ ಬಿಡುಗಡೆ, Gruhalakshmi Scheme Released, Congress, Government New Scheme, Congress Garantee Scheme Update

ನಾವು ನೀಡಿರುವ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಆದಷ್ಟು ಇದನ್ನ ಶೇರ್ ಮಾಡುವ ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು Telegram ಗ್ರೂಪಿಗೆ ಜಾಯಿನ್ ಆಗಬಹುದು.

ಧನ್ಯವಾದಗಳು..!

Namaste.... I am Satish GYT. My edu update kannada' provides an all educational update, News update, Trending news, Gov't Scheme, Scholarship update, Job news, Work from home Entertainment, Cinema news, Uncategorized, All latest news in kannada. I hope this page is helpful for you.

Share this content:

Leave a Comment